ಪಂಜ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

0

ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಕೊಡುಗೆ ಮತ್ತು ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ

ಲಯನ್ಸ್ ಕ್ಲಬ್ ಪಂಜ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರಿನಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.

ಸಭಾಧ್ಯಕ್ಷತೆ ಲಯನ್ಸ್ ಕ್ಲಬ್ ಪಂಜ ಇದರ ಅಧ್ಯಕ್ಷ ಲI ದಿಲೀಪ್ ಬಾಬ್ಲುಬೆಟ್ಟು ರವರು ವಹಿಸಿದ್ದರು, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಶರೀಫ್ ಧ್ವಜಾರೋಹಣ ನೆರವೇರಿಸಿದರು.

ಲಯನ್ಸ್ ಅಧ್ಯಕ್ಷ ಲl ದಿಲೀಪ್ ಬಾಬ್ಲು ಬೆಟ್ಟುರವರು, ದೇಶಭಕ್ತಿ ಗೀತೆ ಮತ್ತು ಭಾಷಣ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಿದರು, ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಶಾಲೆಯ ಎಸ್‌.ಡಿ.ಎಂ.ಸಿ ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕಿಗೆ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಭುವನೇಶ್ವರಿ , ವಲಯಾಧ್ಯಕ್ಷ ಲ l ಸಂತೋಷ್ ಜಾಕೆ, ನಿಕಟಪೂರ್ವ ಅಧ್ಯಕ್ಷ ಲlಪುರುಷೋತ್ತಮ ದಂಬೆಕೋಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರೇವತಿ, ಪಂಚಾಯತ್ ಸದಸ್ಯರಾದ ಮಾಯಿಲಪ್ಪ ಗೌಡ, ಕಾರ್ಯದರ್ಶಿ ಲl ವಾಸುದೇವ ಮೇಲ್ಪಾಡಿ, ಕೋಶಾಧಿಕಾರಿ ಲlಆನಂದಗೌಡ ಜಲಕದ ಹೊಳೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಪಂಜ ಇದರ ಸದಸ್ಯರು, ಶಾಲೆಯ ಎಸ್‌.ಡಿ.ಎಂ.ಸಿ ಸದಸ್ಯರು, ಪೋಷಕರು ಶಾಲಾ ಶಿಕ್ಷಕರು, ಉಪಸ್ಥಿತರಿದ್ದರು, ಮುಖ್ಯ ಶಿಕ್ಷಕಿ ಭುವನೇಶ್ವರಿ ಸ್ವಾಗತಿಸಿ, ಕಾರ್ಯದರ್ಶಿ ಲl ವಾಸುದೇವ ಮೇಲ್ಪಾಡಿ ವಂದಿಸಿದರು.