ಎಲಿಮಲೆ ಪ್ರೌಢಶಾಲೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ

0

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣವನ್ನು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಲೋಚನ ದೇವ ನೆರವೇರಿಸಿದರು.
ನಂತರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಭಾ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಸದಸ್ಯರಾದ ಧನಂಜಯ ಬಾಳೆತೋಟ ಇ ವಹಿಸಿದ್ದರು. ಅತಿಥಿಗಳಾಗಿ ಎಸ್‌ಡಿಎಂಸಿ ಸದಸ್ಯರಾದ ಕೃಷ್ಣಪ್ಪ ಗೌಡ ಅಡಿಕೆಹಿತ್ಲು, ಅಚ್ಚುತ ಮುಂಡೋಕಜೆ, ಮುಖ್ಯ ಶಿಕ್ಷಕಿ ಸಂಧ್ಯಾ ಕೆ ಹಾಗೂ ಉಮ್ಮರ್ ಹನೀಫೀ ಜೀರ್ಮಕಿ ಭಾಗವಹಿಸಿದ್ದರು. ಈ ಸಂದರ್ಭ ಶಿಕ್ಷಕರು, ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.