ಮಾನ್ಯಡ್ಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0


ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾನ್ಯಡ್ಕ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮೇದಪ್ಪ ಗೌಡ ಇವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಹೇಮಾ ಆಲಾಜೆ ಮುಖ್ಯ ಶಿಕ್ಷಕರಾದ ಶ್ರೀಮತಿ ಅಮೃತ ವಾಗ್ಲೆ ಹಾಗೂ ಇತರ ಎಲ್ಲಾ ಎಸ್ ಡಿ ಎಮ್ ಸಿ ಸದಸ್ಯರು , ಪೋಷಕರು ಹಾಗೂ ಊರಿನ ವಿದ್ಯಾ ಅಭಿಮಾನಿಗಳು ಉಪಸ್ಥಿತರಿದ್ದರು.