ರೋಟರಿ ವಿದ್ಯಾಸಂಸ್ಥೆಗಳು ಮತ್ತು ರೋಟರಿ ಕ್ಲಬ್ ಗಳ ಸಂಯುಕ್ತ ಆಶ್ರಯದಲ್ಲಿ 77ನೇ ಸ್ವಾತಂತ್ರ್ಯೋತ್ಸವ

0

ರೋಟರಿ ವಿದ್ಯಾಸಂಸ್ಥೆಗಳು ಮತ್ತು ರೋಟರಿ ಕ್ಲಬ್ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಪ್ರಾಥಮಿಕ ಶಾಲೆಯ ಆವರಣದಲ್ಲಿ ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ.ಆನಂದ ಖಂಡಿಗ ರವರು ನೆರವೇರಿಸಿದರು.

ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೊ. ಪಿಪಿ ಪಿಹೆಚ್ಎಫ್ ಗಿರಿಜಾಶಂಕರ ತುದಿಯಡ್ಕ ರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಸ್ಥೆಯ ಸ್ಥಾಪಕಾದ್ಯಕ್ಷ ರಾದ ರೊ ರಾಮಚಂದ್ರ ಪಿ, ರೋಟರಿ ಚಾರೀಟೇಬಲ್ ಟ್ರಸ್ಟ ಹಾಗೂ ರೋಟರಿ ಕ್ಲಬ್ ನ ಎಲ್ಲ ಸದಸ್ಯರುಗಳು, ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಬೊಮ್ಮೆಟ್ಟಿ , ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವೀಣಾ ಶೇಡಿಕಜೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹರಿಣಾಕ್ಷಿ ಕೆ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆ 01 ರಿಂದ ಆ 12 ರವರೆಗೆ ದಕ್ಷಿಣ ಕೊರಿಯಾದಲ್ಲಿ ನಡೆದ 25 ನೇ ಅಂತಾರಾಷ್ಟ್ರೀಯ ಸ್ಕೌಟ್ & ಗೈಡ್ ಜಾಂಬೂರಿಯಲ್ಲಿ ಭಾಗವಹಿಸಿದ ನಮ್ಮ ಸಂಸ್ಥೆಯ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಶ್ವಿನಿ ಎಸ್ ರನ್ನು ಗೌರವಿಸಿ ಪುರಸ್ಕಾರಿಸಲಾಯಿತು.
ಪ್ರೌಢಶಾಲಾ ವಿದ್ಯಾರ್ಥಿನಿ ಹಿಮಾನಿ ಸ್ವಾಗತಿಸಿ , ಪಿಯುಸಿ ವಿದ್ಯಾರ್ಥಿ ಶಶಾಂಕ ಕೆ ವಂದಿಸಿದರು. ವಿದ್ಯಾರ್ಥಿನಿ ಭಾನವಿ ಕೊೖಂಗಾಜೆ ಕಾರ್ಯಕ್ರಮ ನಿರೂಪಿಸಿದರು.