ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸುಳ್ಯದ ಗಿರಿದರ್ಶಿನಿ ಸಭಾಭವನದ ವಠಾರದಲ್ಲಿ ನಡೆಸಲಾಯಿತು.
ಸಂಘದ ಅಧ್ಯಕ್ಷರಾದ ಜನಾರ್ದನ ಬಿ.ಕುರುಂಜಿಭಾಗ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್, ಕೋಶಾಧಿಕಾರಿ ಜನಾರ್ದನ ನಾಯ್ಕ್ ಕೇರ್ಪಳ, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗಿರಿಜ, ಯುವ ವೇದಿಕೆಯ ಅಧ್ಯಕ್ಷ ಮೋಹನ ಪೆರಾಜೆ, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವೇದಿಕೆ ಮತ್ತು ಯುವ ವೇದಿಕೆ ಸದಸ್ಯರು ಉಪಸ್ಥಿತರಿದ್ದರು.