ಸ. ಹಿ. ಪ್ರಾ. ಶಾಲೆ ದೇವಚಳ್ಳದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸ ಹಿ ಪ್ರಾ ಶಾಲೆ ದೇವಚಳ್ಳದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜರೋಹಣವನ್ನು ಶಾಲಾ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಜಯಾನಂದ ಪಟ್ಟೆ ನೆರವೇರಿಸಿದರು. ಮುಖ್ಯಗುರುಗಳಾದ ಶ್ರೀಧರ ಗೌಡ ಕೆ ರವರು ಸ್ವಾಗತಿಸಿದರು. ಬಳಿಕ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಮೆರವಣಿಗೆಯ ಮೂಲಕ ಘೋಷಣೆ ಕೂಗುತ್ತಾ ಸಾಗಿದರು.

ನಂತರ ಸಭಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವಿದ್ಯಾರ್ಥಿಗಳಿಂದ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು, ಶಿಕ್ಷಕರು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.
ಕೊನೆಯಲ್ಲಿ ಸಿಹಿತಿಂಡಿ ಹಂಚಲಾಯಿತು.