ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶ್ರೀ ಮತಿ ಶೀಲಾವತಿ ಬೊಳ್ಳಾಜೆ ಅಧ್ಯಕ್ಷರು ಗ್ರಾಮ ಪಂಚಾಯತ್ ನೆಲ್ಲೂರು ಕೆಮ್ರಾಜೆ ಇವರು ನೆರವೇರಿಸಿದರು.


ಅಲ್ಲದೆ ಮಾತೃಭೂಮಿಯ ಘನತೆ ಮತ್ತು ಸ್ವಾತಂತ್ರ್ಯ ಕಾಪಾಡಲು ತಮ್ಮ ಪ್ರಾಣ ತ್ಯಾಗ ಮಾಡಿದ ವೀರರಿಗೆ ಸಮರ್ಪಣೆ ಅರ್ಪಿಸುವ ಫಲಕವನ್ನು ಅನಾವರಣ ಗೊಳಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಅಂಗನವಾಡಿ ಪುಟಾಣಿಗಳು, ಗ್ರಾಮ ಪಂಚಾಯತ್ ಸಿಬ್ಬಂಧಿ ವರ್ಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.