ಗುತ್ತಿಗಾರಿನ ಬ್ಲೆಸ್ಡ್ ಕುರಿಯಾಕೋಸ್ ಅಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

0

ಬ್ಲೆಸ್ಡ್ ಕುರಿಯಾಕೋಸ್ ಅಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣವನ್ನು ಫಾದರ್ ಜೇಮ್ಸ್ ಥೋಮಸ್ ನೆರವೇರಿಸಿದರು. ನಂತರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಭಾ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಪ್ರಯುಕ್ತ ಆಯೋಜಿಸಿದ ಸ್ವರ್ಧೆಗಳ ವಿಜೇತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.. ವೇದಿಕೆಯಲ್ಲಿ ಮುಖ್ಯ ಅತಿಥಿ ಯಾಗಿ ಫಾದರ್ ಜೇಮ್ಸ್ ಥಾಮಸ್ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಯಿನಿಯಾದ ಸಿಸ್ಟರ್ ಟ್ರೀಸಾ ಜಾನ್,ಶಾಲಾ ಸಂಚಾಲಕಿ ಸಿಸ್ಟರ್ ಪಾವನಾ,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಲಿಜೋ ಜೋಸ್, ಉಪಾಧ್ಯಕ್ಷರಾದ ರಾಜ್ ಕುಮಾರ್ ಪೂಂಬಾಡಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾಭಿಮಾನಿಗಳು ,ಪೋಷಕವೃಂದದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಾದ ಶೆರಿನ್ ವರ್ಗೀಸ್ ಸ್ವಾಗತಿಸಿ, ಜಾಕ್ಸನ್ ಡಿಸೋಜಾ ವಂದಿಸಿ, ಶಾಲಾಶಿಕ್ಷಕಿ ರೀಬಾ ಬಾಬು ಕಾರ್ಯಕ್ರಮ ನಿರೂಪಿಸಿದರು.