ಕೊಡಿಯಾಲ : ಮೂವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಕೊಡಿಯಾಲ ಗ್ರಾಮದ ಮೂವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕೊಡಿಯಾಲ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಹರ್ಷನ್ ಕೆ .ಟಿ ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಕೆ ಇವರು ವಹಿಸಿಕೊಂಡಿದ್ದರು. ಅತಿಥಿಗಳಾಗಿ ಸುಬ್ರಹ್ಮಣ್ಯ ಕೆ ಅಧ್ಯಕ್ಷರು ನಮ್ಮೂರು ನಮ್ಮ ಕನಸು ಜನಸೇವಾ ಟ್ರಸ್ಟ್ ಕಲ್ಪಡ, ಶಿವರಾಮ ಉಪಾಧ್ಯಾಯ ಆಡಳಿತ ಮೋಕ್ತೇಸರರು ಕಲ್ಪಡ ಉಳ್ಳಾಕುಲು ದೈವಸ್ಥಾನ, ಕೇಶವ ಕೆ.ಪಿ ಕಲ್ಪಡ ತೋಟ ಅಧ್ಯಕ್ಷರು ಶ್ರೀ ಉಳ್ಳಾಕುಲು ದೈವಸ್ಥಾನ ಕಲ್ಪಡ ಆಡಳಿತ ಸಮಿತಿ, ಯುವರಾಜ ಸ್ನೇಹಿತರ ಬಳಗ ಕಲ್ಪಡ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ನಿರ್ಮಲ ಕೆ ಎಂ ಉಪಸ್ಥಿತರಿದ್ದರು. ಮಹನೀಯರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಶಾಲಾ ಸಹ ಶಿಕ್ಷಕಿ ಶ್ರೀಮತಿ ಪುಷ್ಪಾ ಎಂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ನಿರ್ಮಲ ಕೆ .ಎಂ. ವಂದಿಸಿದರು.