ಜಾಲ್ಸೂರು ಶಾಲೆಯಲ್ಲಿ‌ ಸ್ವಾತಂತ್ರ್ಯೋತ್ಸವ ‌ದಿನಾಚರಣೆ

0

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಇಲ್ಲಿ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮಹಮ್ಮದ್ ನೌಫಲ್ ನೆರವೇರಿಸಿದರು.

ಘೋಷಣೆಗಳನ್ನು ಕೂಗುತ್ತಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ತೆರಳಿ ಬಂದ ಬಳಿಕ ಸಭಾ ಕಾರ್ಯಕ್ರಮ ವನ್ನು ಮಹಮ್ಮದ್ ನೌಫಲ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು .

ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಪ್ರೇಮ ,ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಎಂ.,ಹಿರಿಯ ಶಿಕ್ಷಕಿ ಶ್ರೀಮತಿ ಚಂದ್ರಾವತಿ ವೈ.ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು .

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕೊನೆಯಲ್ಲಿ ಶಿಕ್ಷಕಿ ಶ್ರೀಮತಿ ದಿವ್ಯಾ ಬಿ. ಧನ್ಯವಾದ ಸಮ ರ್ಪಿಸಿದರು .ಶ್ರೀಮತಿ ಪೂರ್ಣಿಮಾ ಎಂ.ಎಂ.ಕಾರ್ಯಕ್ರಮ ನಿರೂಪಿಸಿದರು .