ರೋಟರಿ, ಇನ್ನರ್ ವ್ಹೀಲ್ ಕ್ಲಬ್ ಹಾಗೂ ಇತರೇ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಕ್ತದಾನ ಶಿಬಿರ

0

77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನರ್ ವ್ಹೀಲ್ ಕ್ಲಬ್ ಸುಳ್ಯ, ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಸುಳ್ಯ, ಎನ್.ಎಸ್.ಎಸ್., ವೈ.ಆರ್.ಸಿ. ರೆಡ್ ರಿಬ್ಬನ್ ಕ್ಲಬ್ ಎನ್ ಎಮ್ ಸಿ ಸುಳ್ಯ ಜಂಟಿಯಾಗಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದಿಂದ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಸಭಾಪತಿ ಸುಧಾಕರ್ ರೈ, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಮೆಡಿಕಲ್ ಆಫೀಸರ್ ಡಾ. ರ್ರಾಮಚಂದ್ರ ಭಟ್, ಯುವ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ರೊ| ಸಂಜೀವ ಕುದ್ಪಾಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷ ರೊ| ಆನಂದ ಖಂಡಿಗ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ಅಧ್ಯಕ್ಷ ರಾದ ರೊ|ಗಿರೀಶ್ ನಾರ್ಕೊಡು, ಇನ್ನರ್ ವೀಲ್ ಕ್ಲಬ್ ಸುಳ್ಯ ಇದರ ಅಧ್ಯಕ್ಷೆ ಸವಿತ ನಾರ್ಕೊಡು, ಮಾರ್ನಿಂಗ್ ಕ್ರಿಕೆಟ್ ಸಂಘಟನೆ ಅಧ್ಯಕ್ಷ ಗಿರೀಶ್ ಅಡ್ಪಂಗಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೊ|ಗಿರೀಶ್ ನಾರ್ಕೊಡು ವಂದಿಸಿದರು.

ರಕ್ತದಾನ ಶಿಬಿರದಲ್ಲಿ ಸುಮಾರು 40ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡುವುದರ ಮುಖಾಂತರ ಕಾರ್ಯಕ್ರಮ ಯಶಸ್ವಿಯಾಯಿತ್ತು.