ಸುಬ್ರಹ್ಮಣ್ಯ ಅಂಗನವಾಡಿಯಲ್ಲಿ ಸ್ವಾತಂತ್ರ್ಯೋತ್ಸವ

0

ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ವಾಣಿ ವಾಣಿತ ಸಮಾಜ ಇವರ ಜಂಟಿ ಸಹಯೋಗದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾರ್ಪೊರೇಟಿವ್ ಬ್ಯಾಂಕ್ ನಿರ್ದೇಶಕಿ ಶ್ರೀಮತಿ ಶೋಭಾ ನಲ್ಲೂರಾಯ ನೆರವೇರಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಶಾಲಾಕ್ಷಿ ಸಹಕರಿಸಿದರು.

ಈ ಸಂದರ್ಭದಲ್ಲಿ ವಾಣಿ ವನಿತಾ ಸಮಾಜ ರಿಜಿಸ್ಟರ್ಡ್ ಅಧ್ಯಕ್ಷ ಶ್ರೀಮತಿ ಹೇಮಾವತಿ, ಕಾರ್ಯದರ್ಶಿ ಪುಷ್ಪ ,ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷ ಶ್ರೀಮತಿ ತ್ರಿವೇಣಿ ದಾಮ್ಲೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸವಿತಾ ಭಟ್ ,ಓಂ ಶ್ರೀ ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಶ್ರೀಮತಿ ಸುಜಾತ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.