ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ದಿನಾಂಕ ಆ 15ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಗ್ರಾಮ ಪಂಚಾಯತ್ ನಲ್ಲಿ ಬೆಳಗ್ಗೆ 8.30 ಕ್ಕೆ ದ್ವಜರೋಹಣ ಕಾರ್ಯಕ್ರಮ ನಡೆಯಿತು ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ “Meri Maati Mera Desh” (ನಮ್ಮ ನೆಲ ನಮ್ಮ ದೇಶ ” ಎಂಬ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದ್ದು

ಮತ್ತು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪಂಚ ಅಭಿಯಾನದಡಿ “ಕೋಟಿ ವೃಕ್ಷ ಅಭಿಯಾನ ” ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು.

ಈ ದಿನ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಿತ್ರ ದೇವ ಮಡಪ್ಪಾಡಿ ಇವರು ನೆರವೇರಿಸಿದರು. ಎಲ್ಲಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಸರ್ವ ಸದಸ್ಯರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ,

ಶಾಲಾ ಮುಖ್ಯೋಪಾಧ್ಯಾಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಎಲ್ಲಾ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಗ್ರಾಮಸ್ತರು ಹಾಜರಿದ್ದರು.