ಅಮೈಮಡಿಯಾರು ಶಾಲೆಯಲ್ಲಿ ಸ್ವಾತಂತ್ರ್ಯ ಆಚರಣೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೈ ಮಡಿಯಾರಿನಲ್ಲಿ ಸ್ವಾತಂತ್ರೋತ್ಸವವನ್ನು ಆ.15 ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ,ಶಿಕ್ಷಕರು, ಊರ ವಿದ್ಯಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ರಾಮಕ್ಕ ಸ್ವಾಗತಿಸಿ, ಶಿಕ್ಷಕಿ ಗೀತಾ ವಂದಿಸಿದರು. ಬಳಿಕ ಸಭಾ ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಪದ್ಮನಾಭ ಅತ್ಯಾಡಿ ಮತ್ತು ಶಿಕ್ಷಕಿ ಜೂಲಿಯಟ್ ಡಿಸೋಜ ಇವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು .