ಐವರ್ನಾಡಿನಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

0

ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಕಾಲನಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.15 ರಂದು ನಡೆದಿದೆ.

ನಿಡುಬೆ 62 ಸಿ.ಆರ್.ಕಾಲನಿಯ ಸೆಲ್ವರಾಜ್ (ಗೋವಿಂದರಾಜ್ ) (60) ಎಂಬವರು ಮನೆಯ ಫ್ಯಾನಿಗೆ ನೈಲಾನ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ.

ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.