ಸುಬ್ರಹ್ಮಣ್ಯ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

0

ಸುಬ್ರಹ್ಮಣ್ಯ ಗ್ರಾಮದ ರವಿ ಅಜ್ಜಿಹಿತ್ಲು ಆ.17 ರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಅವರಿಗೆ 35 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಹಾಗೂ ಮಕ್ಕಳು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.