ಸೆ.5ರಂದು ಸುಳ್ಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ

0

ಸೆ.5ರಂದು ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಈ ಬಾರಿ ಸುಳ್ಯದಲ್ಲಿ ನಡೆಯಲಿದೆ. ಕಾರ್ಯಕ್ರಮ ಯಶಸ್ವಿಯಾಗಿ ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಪೂರ್ವಭಾವಿ ಸಭೆಗಳು ನಡೆದಿದೆ.

ಸುಳ್ಯದ ಅಮರಶ್ರೀಭಾಗ್‌ನಲ್ಲಿರುವ ಕುರುಂಜಿ ಜಾನಕಿ ವೆಂಕಟ್ರಮಣ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿ, ತಾಲೂಕು ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಸನ್ಮಾನ, ಸ್ಕೌಟ್ ಗೈಡ್ಸ್ ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾಸಂಸ್ಥೆಗಳಿಗೆ ಸನ್ಮಾನಗಳು ನಡೆಯಲಿದೆ.