














ಸುಳ್ಯದ ಅಮರ ಶಿಲ್ಪಿ ದಿ.ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ದಿ. ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 11ನೇ ವರ್ಷದ ಪುಣ್ಯ ಸ್ಮರಣೆಯನ್ನು ಕೆ. ವಿ. ಜಿ. ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಆ. 22ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಶುಪಾಲೆ ಶ್ರೀಮತಿ ಶಿಲ್ಪಾ ಬಿದ್ದಪ್ಪ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂಧಿಗಳು ಉಪಸ್ಥಿತರಿದ್ದು, ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.









