p>

ಚೈಲ್ಡ್ ರೈಟ್ ಟ್ರಸ್ಟ್ ವತಿಯಿಂದ ಮಕ್ಕಳ ಹಕ್ಕುಗಳ ಒಡಂಬಡಿಕೆ ಮತ್ತು ಸುಸ್ಥಿರ ಅಭಿವೃದ್ಧಿಯ ತರಬೇತಿ ಕಾರ್ಯಗಾರ

0

ಚೈಲ್ಡ್ ರೈಟ್ ಟ್ರಸ್ಟ್ ವತಿಯಿಂದ
ಮಕ್ಕಳ ಹಕ್ಕುಗಳ ಪ್ರತಿಪಾದನೆಗಾಗಿ ಅಂತರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳ ತರಬೇತಿ ಕಾರ್ಯಗಾರವು
ಆ. 22 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್ . ಕೆ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ
ಮಕ್ಕಳ ಹಕ್ಕುಗಳ ಗ್ರಾಮ ಸಭೆಯ ಬಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.
ಚೈಲ್ಡ್ ರೈಟ್ ಟ್ರಸ್ಟ್ ನ ನಿರ್ದೇಶಕಿ ಶ್ರೀಮತಿ ಕಸ್ತೂರಿ ಬೊಳುವಾರು ರವರು ತರಬೇತಿ ಹಾಗೂ ಮಾಹಿತಿ ನೀಡಿದರು.
ಚೈಲ್ಡ್ ರೈಟ್ ಟ್ರಸ್ಟ್ ಸಂಯೋಜಕಿ ದಿವ್ಯ ಸುಳ್ಯ ರವರು ಕಾರ್ಯಕ್ರಮ ನಿರೂಪಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,ಗ್ರಾಮ
ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಶಾಲೆಯ ಶಿಕ್ಷಕರು, ಸಿ.ರ್.ಪಿ, ಅಂಗನವಾಡಿ ಮೇಲ್ವಿಚಾರಕರು ಭಾಗವಹಿಸಿದರು.