ನಾರ್ಣಕಜೆ ಹಿ.ಪ್ರಾ.ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ನಾರ್ಣಕಜೆ ಹಿ.ಪ್ರಾ.ಶಾಲೆಯಲ್ಲಿ ಆ.22 ರಂದು ನಡೆಯಿತು.
ಸುದ್ದಿ ಬಿಡುಗಡೆ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಪ್ರಸ್ತಾವಿಕವಾಗಿ ಮಾತನಾಡಿದರು.
ಶಾಲಾ ಮುಖ್ಯ ಗುರುಗಳಾದ ಪೂರ್ಣಿಮಾರವರು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಸುದ್ದಿ ಪತ್ರಿಕೆಯ ವರದಿಗಾರರಾದ ಶಿವರಾಮ ಕಜೆಮೂಲೆ, ದಯಾನಂದ ಕೊರತ್ತೋಡಿ ಹಾಗೂ ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.