ಸುಳ್ಯದ ಶ್ರೀ ರಾಮ ಪೇಟೆಯಲ್ಲಿರುವ ಶ್ರೀ ರಾಮ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯು ಆ.23 ರಂದು ನಡೆಯಿತು.















ರಾಮ ಮಂದಿರದ ಬ್ರಹ್ಮಕಲಶೋತ್ಸವ ನಡೆದು 12 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಸುವ ಪೂರ್ವ ಭಾವಿಯಾಗಿ ಜ್ಯೋತಿಷ್ಯರತ್ನ ನಾರಾಯಣ ಕೊಳ್ಚಪ್ಪೆ ಯವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆ ಇರಿಸಲಾಯಿತು.

ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ ಚಿಂತನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಂದಿರದ ಆಡಳಿತ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ಕೆ.ಉಪೇಂದ್ರ ಪ್ರಭು ಹಾಗೂ ಧರ್ಮದರ್ಶಿ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಶ್ರೀ ರಾಮ ಸಾಂಸ್ಕೃತಿಕ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.









