ಸುಬ್ರಹ್ಮಣ್ಯದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಉದ್ಘಾಟನೆ

0

ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇದರ ನೇತೃತ್ವದಲ್ಲಿ ಆ 23ರಂದು ಪಂಚಾಯತ್ ಸಭಾಂಗಣದಲ್ಲಿ ಉಚಿತ ಫುಡ್ ಪಲ್ಸ್ ಥೆರಪಿ ಶಿಬಿರ ಉದ್ಘಾಟನೆಗೊಂಡಿತು.

ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಎಸ್.ಎನ್ ಉಡುಪ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ ನಾವು ವೈದ್ಯರನ್ನು ಗೇಲಿ ಮಾಡುವುದು ಸರಿಯಲ್ಲ. ಶ್ರದ್ಧೆಯಿಂದ ವೈದ್ಯರಿಂದ ತೆಗೆದುಕೊಳ್ಳುವ ಔಷಧಿ ಅಮೃತಕ್ಕೆ ಸಮಾನ. ಇಂದು ವಿವಿಧ ಹೊಸತನದ ವೈದ್ಯ ಪದ್ಧತಿಯಿಂದ ಯಾವುದೇ ರೋಗವನ್ನು ಸುಲಭವಾಗಿ ಗುಣಪಡಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆಪದವು ವಹಿಸಿದ್ದರು. ಪುತ್ತೂರಿನ ನೆಮ್ಮದಿ ವೆಲ್ನೆಸ್ ಸೆಂಟರ್ನ ಮಾಲಕರಾದ ಪ್ರಭಾಕರ ಸಾಲ್ಯಾನ್ ಉಚಿತ ಪಾದ ಪಲ್ಸ್ ಥೆರಪಿಯ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಲl ರಾಮಚಂದ್ರ ಪಳಂಗಾಯ, ರೋಟರಿ ಕ್ಲಬ್ ಅಧ್ಯಕ್ಷರು ರೋl ಪ್ರಶಾಂತ್ ಕೋಡಿಬೈಲ್,

ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕ ದೇವರಗದ್ದೆ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ದಿನೇಶ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ, ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಲೀಜನ್ ಅಧ್ಯಕ್ಷ ವಿಶ್ವನಾಥ ನಡುತೋಟ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಸ್ವಾಗತಿಸಿ, ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ದಿನೇಶ್ ವಂಧಿಸಿದರು. ಶಿಬಿರವು ಸೆ. 6ರ ತನಕ ನಿರಂತರವಾಗಿ ನಡೆಯಲಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಡಾ. ರವಿ ಕಕ್ಕೆಪದವು ತಿಳಿಸಿದ್ದಾರೆ.