ಪುತ್ತೂರು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ :ಸಾನ್ವಿ ದೊಡ್ಡಮನೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿ ಕಛೇರಿ ಪುತ್ತೂರು, ಪ್ರಗತಿ ಆಂಗ್ಲ ಮಾಧ್ಯಮ ಶಾಲೆ ಕಾಣಿಯೂರು ಇದರ ಆಶ್ರಯದಲ್ಲಿಆ.16 ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ನಿರಂತರ ಯೋಗ ಕೇಂದ್ರ ಪಂಜದ ವಿದ್ಯಾರ್ಥಿನಿ ಸಾನ್ವಿ ದೊಡ್ಡಮನೆ, (ಪಂಜ) 3ನೇ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಈಕೆ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬ 6 ನೇ ತರಗತಿ ವಿದ್ಯಾರ್ಥಿನಿ. ಕಡಬ ಶ್ರೀ ಮೂಕಾಂಬಿಕಾ ಮಾರುತಿ ಆಟೋ ವರ್ಕ್ಸ್ ಮಾಲ್ಹಕ ಪಂಜದ ದೊಡ್ಡಮನೆ ನಿತ್ಯಾನಂದ ಮತ್ತು ಶ್ರೀಮತಿ ಸೀತಾಲಕ್ಷ್ಮಿ ದಂಪತಿಗಳ ಪುತ್ರಿ.