ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಅಧಿಕಾರ ಸ್ವೀಕಾರ

0

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ,ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಆ.24 ರಂದು ನಡೆಯಿತು.
ಅಧ್ಯಕ್ಷರಾಗಿ ಶ್ರೀಮತಿ ನಮಿತಾ ರೈ, ಉಪಾಧ್ಯಕ್ಷರಾಗಿ ಆಯ್ಕೆಯಾದ ವೀಣಾ ಮೂಡಾಯಿತೋಟರವರು ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಪನ್ನೆ, ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು ,ಗ್ರಾಮ ಪಂಚಾಯತ್ ಸದಸ್ಯರು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಮತ್ತು ಸಿಬ್ಬಂದಿ ವರ್ಗದವರು,ಗ್ರಾಮಸ್ಥರು ಉಪಸ್ಥಿತರಿದ್ದರು.