















ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.25 ರಂದು ನಡೆಯಿತು. ಶ್ರೀ ಜಲದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು. ನೂರಾರು ಮಂದಿ ಮಾತೆಯರು ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ ಬಿ, ಪಿ.ಜಗನ್ನಾಥ ರೈ, ದಾಮೋದರ ನಾಯ್ಕ, ನಾರಾಯಣ ಕೆ, ಶ್ರೀಮತಿ ಭಾಗ್ಯಲಕ್ಷ್ಮೀ, ಶ್ರೀಮತಿ ಯಶೋಧ ಎ.ಎಸ್ ಮತ್ತು ಸಿಬ್ಬಂದಿ ವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.










