ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ಸುಳ್ಯ ವಲಯ ಮಟ್ಟದ ಪ್ರತಿಭಾ ಕಾರಂಜಿ -2023 ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಇಂದು ದುಗ್ಗಲಡ್ಕ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಶಶಿಕಲಾ ಎ., ಮಾಜಿ ನ.ಪಂ.ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ, ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಗೌಡ ಮೋಂಟಡ್ಕ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ಚಂದ್ರಶೇಖರ, ಕಾರ್ಯದರ್ಶಿ ಚಿನ್ನಪ್ಪ ಗೌಡ, ಕ್ಷೇತ್ರ ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ ಭಾಗವಹಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ವಹಿಸಿದ್ದರು. ಸದಸ್ಯ ನಾರಾಯಣ ಟೈಲರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
















ಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಪಿ.ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಶೋಭಾ ವಂದಿಸಿದರು. ಶಿಕ್ಷಕ ಉಣ್ಣಿಕೃಷ್ಣನ್ ಕಾರ್ಯಕ್ರಮ ನಿರೂಪಿಸಿದರು.
ಸ್ಪರ್ಧಾ ಕಾರ್ಯಕ್ರಮದಲ್ಲಿ ಸುಳ್ಯ ವಲಯ ಮಟ್ಟದ ಶಿಕ್ಷಣ ಸಂಸ್ಥೆಗಳಾದ ದುಗ್ಗಲಡ್ಕ ಪ್ರೌಢಶಾಲೆ, ಕೆ.ಪಿ.ಎಸ್.ಗಾಂಧಿನಗರ, ಗ್ರೀನ್ ವ್ಯೂ, ಸೈಂಟ್ ಜೋಸೆಫ್, ರೋಟರಿ, ಶಾರದಾ, ಶಾಂತಿನಗರ, ಸ್ನೇಹ ಶಾಲೆ, ಸ.ಪ.ಪೂ ಕಾಲೇಜು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.









