ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಬಲಿವಾಡು ಕೂಟ ಹಾಗೂ ಭಜನಾ ಸೇವೆ

0

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಶನಿವಾರದ ಪ್ರಯುಕ್ತ ಭಜನಾ ಸೇವೆ ಹಾಗೂ ಬಲಿವಾಡು ಕೂಟವು ಆ.26ರಂದು ನಡೆಯಿತು.

ದೇವಸ್ಥಾನದಲ್ಲಿ ಸೋಣ ಶನಿವಾರದ ಪ್ರಯುಕ್ತ ಭಜನಾ ಸೇವೆ ಜರುಗಿ ಮಧ್ಯಾಹ್ನ ಶ್ರೀ ಮಲ್ಲಿಕಾರ್ಜುನ ದೇವರಿಗೆ ಮಹಾಪೂಜೆ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಅರ್ಚಕವೃಂದ, ಸಿಬ್ಬಂದಿವರ್ಗದವರು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಊರ -ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.