ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಬಲಿವಾಡು ಕೂಟ – ಭಜನಾ ಸೇವೆ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಶನಿವಾರದ ಪ್ರಯುಕ್ತ ಆ.26ರಂದು ಬಲಿವಾಡು ಕೂಟ, ಭಜನಾ ಸೇವೆ ಜರುಗಿತು.
ಶ್ರಾವಣ ಶನಿವಾರದ ಪ್ರಯುಕ್ತ ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ಜರುಗಿತು.
ಮಧ್ಯಾಹ್ನ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಸೇರಿದಂತೆ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು , ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು , ಭಕ್ತಾದಿಗಳು ಉಪಸ್ಥಿತರಿದ್ದರು.