ಸುಳ್ಯ 55 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪೂರ್ವ ಸಿದ್ಧತಾ ಸಭೆ

0

ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಆಶ್ರಯದಲ್ಲಿ ನಡೆಯಲಿರುವ 55 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವ ಸಿದ್ಧತಾ ಸಭೆಯು ಕಲ್ಕುಡ ದೈವಸ್ಥಾನದ ವಠಾರದಲ್ಲಿ ಆ.28 ರಂದು ನಡೆಯಿತು.

ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಹಂಚುವಿಕೆಯ ಜವಬ್ದಾರಿ ವಲಯವಾರು ಸಮಿತಿ ಸದಸ್ಯರಿಗೆ ವಹಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.