ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು
ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದಲ್ಲಿ ಆ.29 ರಂದು ನಡೆಯಿತು.

ಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಎ.ಎಲ್ ರವರು ವಿಜೇತರಿಗೆ ಬಹುಮಾನ ವಿತರಿಸಿದರು.















ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ “ಲಂಚ ಭ್ರಷ್ಟಾಚಾರ ವಿರುದ್ದದ ಮತದಾನ ಜಾಗೃತಿಯ ಕುರಿತು ಸ್ಪರ್ಧೆ ಏರ್ಪಡಿಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ತಿಳಿಸಿದರು.
ವೇದಿಕೆಯಲ್ಲಿ ಸುದ್ದಿ ಪತ್ರಿಕೆಯ ವರದಿಗಾರ ಕುಶಾಂತ್ ಕೊರತ್ಯಡ್ಕ ಹಾಗೂ ಶಾಲಾ ಶಿಕ್ಷಕ ವೃಂದದವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ಭಾಗವಹಿಸಿ ದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.









