ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

0

ಸುಳ್ಯ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆ.31 ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರು ಅಧ್ಯಕ್ಷತೆ ವಹಿಸಿ “ವಿಶ್ವಕ್ಕೆ ಶಾಂತಿ, ಸೌಹಾರ್ದತೆಯ ಸಂಕೇತವನ್ನು ಸಾರಿದ ವಿಶ್ವ ಮಾನವ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ನಮಗೆಲ್ಲ ಮಾರ್ಗದರ್ಶನ ವಾಗಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ಇಂಟೆಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಕೃಷ್ಣ ಭಟ್ ದೊಡ್ಡತೋಟ, ರಾಜು ಪಂಡಿತ್, ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಂಜಿತ್ ರೈ‌ ಮೇನಾಲ, ಬಾಲಕೃಷ್ಣ ಸಂಕೇಶ , ಸೌಕತ್ ಅಲಿ, ಗಂಗಾಧರ ಮೇನಾಲ ಇದ್ದರು.