ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

0


ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ೨೦೨೩-೨೪ನೆ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಇವರು ನೆರವೇರಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯರಾಗಬೇಕು. ಇಂತಹ ಸಂಘಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು.


ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆಲಂಕಾರಿನ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ರೈ ಅವರು ಮಾತನಾಡಿ ವಿದ್ಯಾರ್ಥಿ ಸಂಘಗಳು ನಾಯಕತ್ವವನ್ನು ಮೈಗೂಡಿಸಿಕೊಳ್ಳಲು ಅತ್ಯಂತ ಸಶಕ್ತವಾದ ವೇದಿಕೆಯಾಗಿದೆ ಎಂದು ಹೇಳಿ ನಾಯಕತ್ವ ಎಂದಾಗ ಬರಿಯ ರಾಜಕೀಯ ನಾಯಕತ್ವ ಮಾತ್ರವೇ ಅಲ್ಲ, ಬದಲಾಗಿ ಅದು ಸಮಗ್ರ ನಾಯಕತ್ವ ಆಗಿರಬೇಕು ಎಂದರು.


ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದ ಈ ಸಂದರ್ಭದಲ್ಲಿ ಪ್ರಾಂಶುಪಾಲ ಸೀತಾರಾಮ ಕೇವಳ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ೧೦ನೆ ತರಗತಿಯ ಸ್ಪರ್ಷಾ ಜೆ. ಶೆಟ್ಟಿ ಮತ್ತು ಬಳಗ ಪ್ರಾರ್ಥನೆ, ಆಯಿಷಾತ್ ಹನ್ನಾ ಸಂವಿಧಾನದ ಪೀಠಿಕೆ ವಾಚನ, ಸಂಘದ ಅಧ್ಯಕ್ಷ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೀಪಕ್ ಬಿ.ಎಂ. ವಂದನಾರ್ಪಣೆ, ೧೦ನೆ ತರಗತಿಯ ಕದೀಜತ್ ಅಝೀಲಾ ನಿರೂಪಣೆಗಳಲ್ಲಿ ಸಹಕರಿಸಿದರು. ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಉಪಸ್ಥಿತರಿದ್ದರು.