ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ನಾಯಿಗಳಿಗೆ ಉಚಿತ‌ ಲಸಿಕೆ ಅಭಿಯಾನ

0

ಸೆ.2 ರಂದು ಸುಳ್ಯದಲ್ಲಿ ಚಾಲನೆ

ವಿಶ್ವ ರೇಬಿಸ್ ದಿನಾಚರಣೆ ಪ್ರಯುಕ್ತ ನಾಯಿಗಳಿಗೆ ಉಚಿತವಾಗಿ ರೇಬಿಸ್ ರೋಗ ನಿರೋಧಕ ಲಸಿಕೆಯನ್ನು‌ ಉಚಿತವಾಗಿ ನೀಡಲು ಯೋಜನೆ ರೂಪಿಸಲಾಗಿದ್ದು ಸೆ.2 ರಂದು ಸುಳ್ಯದಲ್ಲಿ ಚಾಲನೆ ನೀಡಲಾಗುತ್ತದೆ.

ಸೆ.2 ರಿಂದ ಆರಂಭಗೊಂಡು ಸೆಪ್ಟೆಂಬರ್ ತಿಂಗಳ ಪೂರ್ತಿ ಈ ಅಭಿಯಾನ ನಡೆಯಲಿದ್ದು ತಾಲೂಕು ಪಶು ಆರೋಗ್ಯ‌ಕೇಂದ್ರ ಹಾಗು ತಾಲೂಕಿನ ಎಲ್ಲ ಪಶು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ.

ಸೆ.2 ರಂದು ಶಾಸಕಿ ಭಾಗೀರಥಿ ಮುರುಳ್ಯ ರವರು ಸುಳ್ಯದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.