














ಕೆ.ವಿ.ಜಿ ನರ್ಸಿಂಗ್ ಸಂಸ್ಥೆಯ ವತಿಯಿಂದ ಓಣಂ ಹಬ್ಬವನ್ನು ಅ. 29ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ
ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ವಹಿಸಿ ಓಣಂ ಶುಭಾಶಯಗಳನ್ನು ಹಾರೈಸಿದರು.

ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್
ಕೆ.ಸಿ, ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಸೇರಿದಂತೆ ಸಂಸ್ಥೆಯ ಪ್ರಾಂಶುಪಾಲರುಗಳು, ವಿದ್ಯಾರ್ಥಿಗಳು ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು. ಓಣಂ ಆಚರಣೆಯ ಪ್ರಯುಕ್ತ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಸ್ಪರ್ಧೆಗಳು, ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಿತು. ಮಧ್ಯಾಹ್ನದ ವಿಶಿಷ್ಟ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.









