ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಬೇಂಗಮಲೆಯಲ್ಲಿ ಸಿ.ಸಿ.ಕ್ಯಾಮರಾ ಅಳವಡಿಕೆ

0

ಕಸ ಎಸೆಯುವವರೇ ಇನ್ನು ಹುಷಾರ್ !

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆ.


ಬೇಂಗಮಲೆ ಪರಿಸರದಲ್ಲಿ ಜನರು ತ್ಯಾಜ್ಯ ತಂದು ಎಸೆಯುತ್ತಿದ್ದು ಸಾರ್ವಜನಿಕರಿಗೆ ಇದರಿಂದ ಸಮಸ್ಯೆಯಾಗುತ್ತಿದೆ.
ಪಂಚಾಯತ್ ವತಿಯಿಂದ ಸಾರ್ವಜನಿಕರ ಸಹಕಾರದೊಂದಿಗೆ ಇಲ್ಲಿ ಪ್ರತೀ ತಿಂಗಳು ಸ್ವಚ್ಛತಾ ಕಾರ್ಯ ನಡೆಯುತ್ತಿದೆ.


ಆದರೆ ಸ್ವಚ್ಛತೆ ಮಾಡಿದಷ್ಟು ಇಲ್ಲಿ ಕಸಗಳು ಬಂದು ಬೀಳುತ್ತಿದೆ.
ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ವಲು ಬೇಂಗಮಲೆಯಲ್ಲಿ ಈಗ 10 ಕಡೆ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆ.
ಈಗಾಗಲೆ ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುತ್ತಿದೆ.


ಆದರೂ ತ್ಯಾಜ್ಯ ಎಸೆಯುವವರ ಸಂಖ್ಯೆ ಜಾಸ್ತಿಯಾಗಿದೆ.
ಇನ್ನು ಮುಂದೆ ಕಸ ಎಸೆಯುವ ಪ್ರತಿಯೊಬ್ಬರನ್ನು ಕೂಡ ಪತ್ತೆ ಹಚ್ಚಲು ಸಾಧ್ಯವಾಗುವಂತೆ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆ.