ತೀರಾ ಹದೆಗೆಟ್ಟ ಎಡಮಂಗಲ ಪ್ರೌಢಶಾಲೆಗೆ ಹೋಗುವ ರಸ್ತೆ

ರಸ್ತೆ ದುರಸ್ತಿಗೊಳಿಸುವಂತೆ ಪಂಚಾಯತ್ ಅಧ್ಯಕ್ಷರಿಗೆ ಶಾಲಾ ವಿದ್ಯಾರ್ಥಿಗಳಿಂದ ಮನವಿ

0

ಎಡಮಂಗಲ ಮುಖ್ಯ ರಸ್ತೆಯಿಂದ ಎಡಮಂಗಲ ಸರಕಾರಿ ಪ್ರೌಢಶಾಲೆಗೆ ಹೋಗುವ ಕಚ್ಚಾರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಮತ್ತು ಮಣ್ಣಿನ ರಸ್ತೆಯಾಗಿರುವುದರಿಂದ ಮಳೆಗಾಲದಲ್ಲಿ ನಡೆದುಕೊಂಡು ಹೋಗಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು ಈ ಬಗ್ಗೆ ರಸ್ತೆಯನ್ನು ಸರಿಪಡಿಸಿಕೊಡುವಂತೆ ಶಾಲಾ ವಿದ್ಯಾರ್ಥಿಗಳು ಗ್ರಾ.ಪಂ. ಅಧ್ಯಕ್ಷರಿಗೆ ಸೆ.೨ರಂದು ಮನವಿ ನೀಡಿದ್ದಾರೆ.
ಶಾಲಾ ಬಳಿ ಮುಖ್ಯ ರಸ್ತೆಯಲ್ಲಿ ವಾಹನ ಚಾಲಕರು ಅತೀ ವೇಗದಿಂದ ಚಲಾಯಿಸಿಕೊಂಡು ಹೋಗುತ್ತಿದ್ದು, ಇಲ್ಲಿ ಹಂಪ್ ಅಳವಡಿಸಬೇಕೆಂದೂ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಶಾಲಾ ನಾಯಕ ಸಮಂತ್ ಎಂ, ಉಪನಾಯಕ ಸ್ವಸ್ತಿಕ್ ಎಂ, ಉಪನಾಯಕಿ ಅರ್ಪಿತ ಕೆ, ಹಾಗೂ ಇತರ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಪಂಚಾಯತ್ ಅಧ್ಯಕ್ಷ ರಾಮಣ್ಣ ಜಾಲ್ತಾರು ಮನವಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here