ಇಂದು ಸುಳ್ಯದಲ್ಲಿ ಜಿಲ್ಲಾ ಶಿಕ್ಷಕರ ದಿನಾಚರಣೆ

0

ಸಿಂಗಾರಿ ಮೇಳದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅದ್ದೂರಿ ಚಾಲನೆ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಇಂದು ಸುಳ್ಯದ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯುತ್ತಿದ್ದು, ಬೆಳಗ್ಗೆ ಸಿಂಗಾರಿ ಮೇಳದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ. ಸುಮಾರು 1 ಗಂಟೆ ಕಾಲ ಸಾಂಸ್ಕೃತಿಕ ವೈವಿಧ್ಯ ನಡೆಯಲಿದ್ದು, ಬಳಿಕ ಸಭಾ ಕಾರ್ಯಕ್ರಮ ನಡೆಯುವುದು.

ಸಚಿವರು, ಶಾಸಕರು ಸಹಿತ ಹಲವು ಗಣ್ಯರು ಭಾಗವಹಿಸುತ್ತಾರೆ. ಜಿಲ್ಲೆಯ 21 ಮಂದಿ ಶಿಕ್ಷಕರಿಗೆ ಜಿಲ್ಲಾ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.