ಸಂಪಾಜೆ ಕಾಂಗ್ರೆಸ್ ನಿಯೋಗದಿಂದ ಮಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಭೇಟಿ

0

ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅನುದಾನಕ್ಕೆ ಮನವಿ ಸಲ್ಲಿಕೆ

ಮಂಗಳೂರಿಗೆ ಆಗಮಿಸಿದ ಸಚಿವ ಜಮೀರ್ ಅಹ್ಮದ್ ಅವರನ್ನು ಸಂಪಾಜೆ ಕಾಂಗ್ರೆಸ್ ನಿಯೋಗವು ಕೆ.ಪಿ.ಸಿ.ಸಿ. ವಕ್ತಾರ ಟಿ. ಎಂ. ಶಹೀದ್ ತೆಕ್ಕಿಲ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಸಂಪಾಜೆ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಹನೀಫ್ ಎಸ್. ಕೆ. ಸಂಪಾಜೆ, ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ ಸಂಪಾಜೆ, ಸುಂದರಿ ಮುಂಡಡ್ಕ, ಹನೀಫ್ ಸೇರಿದಂತೆ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಉಪಸ್ಥಿತರಿದ್ದರು.