ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆ

0

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯದಾಸ್ ಮತ್ತು ನಿರ್ದೇಶಕಿ ಲೀಲಾವತಿ ರುಕ್ಮಯ ದಾಸ್ ರವರು ದೀಪ ಬೆಳಗಿಸಿ ಶಿಕ್ಷಕರಿಗೆ ಶಿಕ್ಷಕ ದಿನಾಚರಣೆಯ ಶುಭ ಹಾರೈಸಿದರು.

ಶಾಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ರವರು ಶಿಕ್ಷಕ ವೃಂದಕ್ಕೆ ಶುಭ ಹಾರೈಸಿ, ನಮ್ಮ ಖಾಸಗಿ ಶಾಲಾ ಶಿಕ್ಷಕರು ತುಂಬಾ ಶ್ರಮ ಮತ್ತು ತ್ಯಾಗ ಮಾಡಿ ದೇಶಕ್ಕೆ ಮುಂದಿನ ಒಳ್ಳೆಯ ಪ್ರಜೆಗಳನ್ನು ರೂಪಿಸುವಲ್ಲಿ ಪಾತ್ರ ವಹಿಸುತ್ತಾರೆ ಎಂದು ನುಡಿದರು.
ಶಾಲೆ ಮತ್ತು ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರ ಸೇವೆ ಮತ್ತು ಬದ್ಧತೆ ಅತೀ ಅವಶ್ಯಕ ಹಾಗಾಗಿ ಸಂಸ್ಥೆಯ ವತಿಯಿಂದ ಎಲ್ಲಾ ಶಿಕ್ಷಕರನ್ನು ಗುರುತಿಸಿ, ಗೌರವಿಸಿ ಸನ್ಮಾನಿಸಲಾಯಿತು.

ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ರವರು ಅಂಧಕಾರದಿಂದ ಬೆಳಕಿನೆಡೆಗೆ ಕೊಂಡಯ್ಯುವವನೇ ಶಿಕ್ಷಕ . ಅಂತಹ ನನ್ನೆಲ್ಲಾ ಶಿಕ್ಷಕ ಮಿತ್ರರಿಗೆ ಶಿಕ್ಷಕ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯದಾಸ್, ನಿರ್ದೇಶಕಿ ಲೀಲಾವತಿ ರುಕ್ಮಯ್ಯದಾಸ್, ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ , ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಶ್ರೀ ಅಬುಸಾಲಿ, ಶ್ರೀಮತಿ ಹೇಮಲತಾ ಕೆ.ಬಿ, ವಿದ್ಯಾರ್ಥಿಗಳು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.