ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ನಿವೃತ್ತ ಶಿಕ್ಷಕ ಕೃಷ್ಣ ನಾವುಡರಿಗೆ ಸನ್ಮಾನ

0

ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತ ಶಿಕ್ಷಕರಾದ ಕೃಷ್ಣ ನಾವುಡ ಅವರನ್ನು ಶ್ರೀ ಗುರುರಾಘವೇಂದ್ರ ಮಠದಲ್ಲಿ ಸೆ.5 ರಂದು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಬಾಲಕೃಷ್ಣ ಭಟ್ ಕೊಡಂಕೇರಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಜತೆಕಾರ್ಯದರ್ಶಿ, ಸದಸ್ಯರು ಭಾಗವಹಿಸಿದ್ದರು.