ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2023-24ನೇ ಸಾಲಿನ ಪ್ರಥಮ ವರ್ಷದ ಬಿ.ಇ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪುನಷ್ಚೇತನ ಕಾರ್ಯಕ್ರಮ

0

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ.ಸಿ.ಇ. ಸಂಸ್ಥೆಯ ಸಭಾಂಗಣದಲ್ಲಿ ಸೆ. 04ರಂದು ನಡೆಯಿತು. ಈ ಸಮಾರಂಭಕ್ಕೆ ಅತಿಥಿಯಾಗಿ ಡಿಜಿಟಲ್ ಚಾನಲ್ಸ್ ಅಂಡ್ ಡಾಟಾ ಅನಾಲಿಟಿಕ್ ಗ್ಲೋಬಲ್ ಬ್ಯುಸಿನೆಸ್ ಸರ್ವಿಸಸ್, ಬೆಂಗಳೂರು ಇದರ ಡೈರೆಕ್ಟರ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಶ್ರೀ ಮಯೂರ್ ವರ್ಮ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವ ಜನಾಂಗ ಹೆಚ್ಚು ಹೆಚ್ಚು ಪ್ರಾಯೋಗಿಕ ಅಭ್ಯಾಸಗಳತ್ತ ಮುಖ ಮಾಡಿಕೊಂಡು ಹಾಗೂ ಕಲಿಕೆಯೊಂದಿಗೆ ಕೌಶಲ್ಯಾಭಿವೃದ್ಧಿಯತ್ತ ಗಮನ ಹರಿಸಿದರೆ ಸ್ವಂತ ಉದ್ಯಮ ಮಾಡಲು ಹಾಗೂ ಉದ್ಯೋಗ ಪಡೆಯಲು ಇದು ಸಹಕಾರಿಯಾಗಲಿದೆ ಎಂದು ಹೇಳಿ ನೆರೆದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಅವರು ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ನಮ್ಮ ವಿದ್ಯಾಸಂಸ್ಥೆ 36 ವರ್ಷಗಳಿಂದ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಉದ್ಯೋಗ ದೊರೆಯಲು ಸಹಕಾರಿಯಾಗಿದೆ. ನೆರೆದ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಕೆ.ವಿ.ಜಿ.ಸಿ.ಇ.ಯನ್ನು ಆಯ್ಕೆ ಮಾಡಿರುವುದಕ್ಕಾಗಿ ಧನ್ಯವಾದ ಸಮರ್ಪಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭಹಾರೈಸಿದರು.

ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು/ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರುಡಾ. ಉಜ್ವಲ್ ಯು.ಜೆ.ಯವರು ಮಾತನಾಡಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ಕಾಲೇಜಿನ ಶೈಕ್ಷಣಿಕ ಪದ್ಧತಿಯಲ್ಲೂ ಅತೀ ಹೆಚ್ಚಿನ ಪ್ರಾಮುಖ್ಯತೆಯನ್ನು ಪ್ರಾಯೋಗಿಕ ವಿಷಯಗಳಿಗೆ ಹಾಗೂ ಉದ್ಯೋಗ ತರಬೇತಿಗಳನ್ನು ನೀಡುತ್ತಿದ್ದು ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಂಡು ಉತ್ತಮ ರೀತಿಯ ಉದ್ಯೋಗ ಪಡೆದು ಕಾಲೇಜಿಗೆ ಉತ್ತಮ ಹೆಸರು ತರಬೇಕೆಂದು ಹೇಳಿ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ.ಯವರು ವಿದ್ಯಾರ್ಥಿಗಳಿಗೆ ಸ್ವಾಗತವನ್ನು ಬಯಸುತ್ತಾ ಕಾಲೇಜಿನ ವಿವಿಧ ವೈಷಿಷ್ಟ್ಯತೆ ಬಗ್ಗೆ ವಿವರಿಸುತ್ತಾ ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಉತ್ತಮ ಸಂಸ್ಕಾರ, ಸಮಯ ಮತ್ತು ಶ್ರದ್ಧೆಯಿಂದ ಶಿಸ್ತನ್ನು ಅಳವಡಿಸಿಕೊಂಡು ಮುಂದಿನ ನಾಲ್ಕು ವರ್ಷಗಳ ವಿದ್ಯಾರ್ಥಿ ಜೀವನ ಉತ್ತಮವಾಗಿ ಇರಲಿ ಎಂದು ಹೇಳಿ ಹೊಸ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಸ್ವಾಗತಿಸಿದರು. ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಡಾ. ಅನಿಲ್ ಬಿ.ವಿ. ಅತಿಥಿಯನ್ನು ಪರಿಚಯಿಸಿದರು.

ಕಾರ್ಯಕ್ರಮದ ಸಂಯೋಜಕರು, ಡೀನ್-ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಮಾಶಂಕರ್ ಕೆ.ಎಸ್. ಧನ್ಯವಾದ ಸಮರ್ಪಿಸಿದರು.ಪ್ರೊ. ಅಶ್ವಿಜ ಕೆ.ಸಿ ಹಾಗೂ ಪ್ರೊ. ಅರುಣ ಪಿ.ಜಿ. ಇವರು ಕಾರ್ಯಕ್ರಮವನ್ನು ನಿರೂಪಿಸಿದರು.