ಚೆಂಬು ಪ್ರೌಢಶಾಲಾ ಸಹಶಿಕ್ಷಕಿ ಶ್ರೀಮತಿ ಕಾಮಾಕ್ಷಿ ಅವರಿಗೆ ಕೊಡಗು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

0

ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಕೊಡಗು ಜಿಲ್ಲಾಡಳಿತದ ವತಿಯಿಂದ ಕೊಡಮಾಡುವ ೨೦೨೨-೨೩ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಚೆಂಬು ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಕಾಮಾಕ್ಷಿ ಅವರು ಭಾಜನರಾಗಿದ್ದು, ಸೆ. 5 ರಂದು ಮಡಿಕೇರಿಯಲ್ಲಿ ನಡೆದ ಜಿಲ್ಲಾ ಶಿಕ್ಷಕ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶ್ರೀಮತಿ ಕಾಮಾಕ್ಷಿ ಅವರು ಮಡಿಕೇರಿ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷರಾಗಿರುವ ಚೆಂಬು ಗ್ರಾಮದ ಸುಬ್ರಹ್ಮಣ್ಯ ಉಪಾಧ್ಯಾಯ ಅವರ ಪತ್ನಿ.