ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕರ ಕಬಡ್ಡಿ ಪಂದ್ಯಾಟ

ನಿಂತಿಕಲ್ಲಿನ ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡಕ್ಕೆ ಪ್ರಶಸ್ತಿ

0

ನೆಹರೂ ಪದವಿ ಪೂರ್ವ ಕಾಲೇಜು ಸುಳ್ಯ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಇವುಗಳ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕೆ.ಎಸ್. ಗೌಡ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು.

ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ವಿಖ್ಯಾತ್ ಗೌಡ ಎ. ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲಾರಿಂದ ಸದಾನಂದ ರೈ ಕೂವೆಂಜ ಮತ್ತು ಭೌತಶಾಸ್ತ್ರ ಉಪನ್ಯಾಸಕ ಉಜ್ವಲ್ ಕೆ ಎಚ್ ಇವರು ತಂಡಕ್ಕೆ ತರಬೇತಿ ನೀಡುತ್ತಿದ್ದಾರೆ. ಸ್ಥಳೀಯ ಆಟಗಾರರನ್ನು ಮಾತ್ರ ಒಳಗೊಂಡಿದ್ದ ವಿಜೇತ ಆಟಗಾರರನ್ನು ಸಂಸ್ಥೆಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೆ ಎಸ್, ಅಭಿನಂದಿಸಿದ್ದಾರೆ.