ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ

0

ಬೆಳಗ್ಗೆ ಒಂದು ತಾಸು ಕುಣಿತ ಭಜನೆ

ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 14 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ, ಸಮ್ಮಾನ ಸಮಾರಂಭ ಸೆ.19 ರಂದು ಮುಕ್ಕೂರಿನಲ್ಲಿ ನಡೆಯಲಿದೆ.ಪ್ರಗತಿಪರ ಕೃಷಿಕ ಮೋಹನ ಬೈಪಡಿತ್ತಾಯ ದೀಪ ಬೆಳಗಿಸಲಿದ್ದಾರೆ. ಅನಂತರ ಪೆರುವಾಜೆ ಶ್ರೀ ಜಲದುರ್ಗಾದೇವಿ ಕುಣಿತ ಭಜನ ತಂಡದಿಂದ ಕುಣಿತ ಭಜನೆ ನಡೆಯಲಿದೆ.

ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದು, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಸಭಾಧ್ಯಕ್ಷತೆ ವಹಿಸಲಿದ್ದು ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಸಾಹಿತಿ ಗೋಪಾಲಕೃಷ್ಣ ಭಟ್ ಮನವಳಿಕೆ, ಬೆಳ್ಳಾರೆ ಸಿಎ ಬ್ಯಾಂಕ್ ನಿವೃತ್ತ ಸಿಬಂದಿ ಜತ್ತಪ್ಪ ಕೆ ಅವರಿಗೆ ಗೌರವಾರ್ಪಣೆ ನಡೆಯಲಿದೆ. ಎಸೆಸೆಲ್ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ನಡೆಯಲಿದೆ.ಅಂಗನವಾಡಿ, ಪ್ರಾಥಮಿಕ, ಪ್ರೌಢ, ಕಾಲೇಜು, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ.