ಪೆರಾಜೆ ಗ್ರಾ. ಪಂ. ಗೆ ಕೊಡಗು ಜಿಲ್ಲಾ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

0

ಕೊಡಗು ಜಿಲ್ಲೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023 ನೇ ಸಾಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ವಚ್ಛತೆಯ ಸುಸ್ಥಿರತೆಯನ್ನು ಕಾಪಾಡಿಕೊಂಡ ಗ್ರಾಮ ಪಂಚಾಯಿತಿಗಳಿಗೆ ನೀಡುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಪೆರಾಜೆ ಗ್ರಾ. ಪಂ ಆಯ್ಕೆಯಾಗಿದೆ.


ಇಂದು ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಸ್ತಿ ಸ್ವೀಕರಿಸಿದರು.