ಕನಕಮಜಲು: ಬೈಕ್ -ಕಾರು ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ

0

ಬೈಕ್ ಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಕಾರು ಚಾಲಕ

ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಕಾಲಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಕನಕಮಜಲಿನಲ್ಲಿ ಸೆ.12ರಂದು ಬೆಳಿಗ್ಗೆ ಸಂಭವಿಸಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಸುಳ್ಯದಲ್ಲಿ ಪಿಜಿಯಲ್ಲಿ ವಾಸ್ತವ್ಯವಾಗಿದ್ದ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಚೈತನ್ಯ ಎಂಬ ಯುವಕನ ಬೈಕ್ ಗೆ ಕನಕಮಜಲು ಗ್ರಾಮ ಪಂಚಾಯತಿ ಬಳಿ ಢಿಕ್ಕಿ ಹೊಡೆದಿದ್ದು, ಕಾರು ಚಾಲಕ ಅಪಘಾತ ನಡೆಸಿ , ನಿಲ್ಲಿಸದೇ ಪರಾರಿಯಾಗಿದ್ದು, ಕೈ ಕಾಲುಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದಿಂದ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿ, ಕಾಲು ಪ್ರಾಕ್ಚರ್ ಆಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.