ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್ ನಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

0

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಇವರ ಆಶ್ರಯದಲ್ಲಿ ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣ ಮಂಗಳಾ ಸ್ಟೇಡಿಯಂ ಮಂಗಳೂರು ನಲ್ಲಿ ಸೆ.11 ರಂದು ಜಿಲ್ಲಾಮಟ್ಟದ ಪ್ರಾಥಮಿಕ ಬಾಲಕ ಬಾಲಕಿಯರ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆದಿದೆ.


ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ತಪಸ್ಯ ನಾಯಕ್, ಹನಿ ಹಾಗೂ ಸಮೀಕ್ಷ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಪ್ರಾಥಮಿಕ ವಿಭಾಗದ ಬಾಲಕರ ವಿಭಾಗದಲ್ಲಿ ಮನ್ವಿತ್ ಬಿಕೆ, ಪಿಯೂಷ್ ಲಾಲ್, ಆರ್ಯನ್, ಷಣ್ಮುಖ ಹಾಗೂ ಗೌರವ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಪ್ರಾಚಿ ಪವರ್, ಸೃಷ್ಟಿ , ಅಮೃತ ಹಾಗೂ ಅಮೃತ ಸಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.