ಬೆಳ್ಳಾರೆ: ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರರವರಿಗೆ ಗುರುರತ್ನ ಪ್ರಶಸ್ತಿ

0


ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಅವರಿಗೆ ಸ್ನೇಹಿತರ ಕಲಾ ಸಂಘದ ವತಿಯಿಂದ ನೀಡುವ ಗುರುರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಉಮೇಶ್ ಮಣಿಕ್ಕಾರ ಅವರು ಜ್ಞಾನದೀಪ ಸಂಸ್ಥೆಯ ಮೂಲಕ ನೀಡುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ನೇಹಿತರ ಕಲಾ ಸಂಘದ ವತಿಯಿಂದ ಬೆಳ್ಳಾರೆಯಲ್ಲಿ ನಡೆದ ಮೊಸರು ಕುಡಿಕೆ ಉತ್ಸವದ ಬೆಳ್ಳಿ ಹಬ್ಬ ಸಂಭ್ರಮದ ಸಮಾರಂಭದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.