ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು : ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಥಮ

0

ಪದವಿ ಪೂರ್ವ ವಿಭಾಗದ ಸುಳ್ಯ ತಾಲೂಕು ಮಟ್ಟದ ಬಾಲಕರ ವಿಭಾಗದ ಫುಟ್ಬಾಲ್ ಪಂದ್ಯಾಟ ಸೆಪ್ಟೆಂಬರ್ 07ರಂದು ಸಂಸ್ಥೆಯ ಆಶ್ರಯದೊಂದಿಗೆ ಕ್ರೀಡಾಂಗಣದಲ್ಲಿ ನಡೆಯಿತು. ನಗರ – ಪಂಚಾಯತ್‌ ಸದಸ್ಯರಾದ ಡೇವಿಡ್ ಧೀರಾ ಕ್ರಾಸ್ತರವರು ದೀಪ ಬೆಳಗಿಸುವ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿದರು.


ತಾಲೂಕಿನ ಒಟ್ಟು 5 ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದವು. ಅಂತಿಮವಾಗಿ ಫೈನಲ್ ಪಂದ್ಯಾಟಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಸ್ಥಾನ ಪಡೆದವು. ಫೈನಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು 10 ಗೋಲುಗಳ ಮುನ್ನಡೆಯೊಂದಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿತು.