ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ವಾಲಿಬಾಲ್ ಪಂದ್ಯಾಟ

0


ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಇವುಗಳ ಆಶ್ರಯದಲ್ಲಿ “ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ಸೆ.13 ರಂದು ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.


ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ರೊ. ಗಿರಿಜಾಶಂಕರ ತುದಿಯಡ್ಕ ವಹಿಸಿದ್ದರು. ರಾಜ್ಯ ವಾಲಿಬಾಲ್ ಅಸೊಸಿಯೇಶನ ಕಾರ್ಯದರ್ಶಿ ಜಯಪ್ರಕಾಶ್ ರೈ ಪಂದ್ಯಾವಳಿಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ವೇದಿಕೆಯಲ್ಲಿ ರೋಟರಿ ಚಾರೀಟೇಬಲ್ ನ ಟ್ರಸ್ಟಿಗಳಾದ ಸೀತಾರಾಮ ರೈ ಕೆ ,ದಯಾನಂದ ಆಳ್ವ, ಪ್ರಭಾಕರನ್ ನಾಯರ್, ಬಾಪೂ ಸಾಹೇಬ್ , ತಾಲೂಕು ದೈಹಿಕ ಶಿಕ್ಷಣ ಸಂಯೋಜಕಿ ಶ್ರೀಮತಿ ಶಾಂತಿ ಪಿ , ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಶೇಡಿಕಜೆ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಹರಿಣಾಕ್ಷಿ ಕೆ ಎಸ್ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು . ಉಪನ್ಯಾಸಕಿ ಶ್ರೀಮತಿ ಕಸ್ತೂರಿ ವಂದಿಸಿದರು. ವಿದ್ಯಾರ್ಥಿಗಳಾದ ಕು. ಸುಶ್ಮ, ಕು. ಸಿಂಚನ, ಕು.ರಮ್ಯ ಪಾರ್ವತಿ ಪ್ರಾರ್ಥಿಸಿದರು. ಉಪನ್ಯಾಸಕಿ ದೀಕ್ಷಿತಾ ಎ. ಕಾರ್ಯಕ್ರಮ ನಿರೂಪಿಸಿದರು.